ಗುಜರಾತ್ ವಿರುದ್ಧ ಭರ್ಜರಿ ಗೆಲುವು ಜಾಕ್ ಮತ್ತು ವಿರಾಟ್ ಆರ್ಭಟ ಆರ್ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಒಂಬತ್ತು ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಪಿಎಲ್ 2024ನೇ ಆವೃತ್ತಿಯ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಒಂಬತ್ತು ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಪಿಎಲ್ 2024ನೇ ಆವೃತ್ತಿಯ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ಭಾನುವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಜಾಕ್ ಮತ್ತು ವಿರಾಟ್ ಆರ್ಭಟ ಜೊತೆಯಾಟ ದಲ್ಲಿ ಶತಕ ಸಿಡಿಸಿದ ಜಾಕ್
ವಿರಾಟ್ ಕೊಹ್ಲಿ ಮತ್ತು ವಿಲ್ ಜಾಕ್ಸ್ ಅವರ ಅದ್ಭುತ ನಾಕ್ಗಳ ಮೂಲಕ ಆರ್ಸಿಬಿ ಈ ಆವೃತ್ತಿಯಲ್ಲಿ ತಮ್ಮ ಮೂರನೇ ಗೆಲುವನ್ನು ದಾಖಲಿಸಿತು. ಈ ಗೆಲುವಿನ ನಂತರವೂ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿ ಆರ್ಸಿಬಿ ಇದ್ದು, ತಮ್ಮ ಮುಂದಿನ ಉಳಿದ ಎಲ್ಲ ಪಂದ್ಯಗಳನ್ನು ಗೆದ್ದರೆ ಪ್ಲೇಆಫ್ಗೆ ಅರ್ಹತೆ ಪಡೆಯುವ ಸಾಧ್ಯತೆ ಇದೆ. ಮತ್ತೊಂದೆಡೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿರುವ 9 ಪಂದ್ಯಗಳಿಂದ 5ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಇದನ್ನೂ ಓದಿ:- ಆಧಾರ್ ಕಾರ್ಡ್ ತಿದ್ದುಪಡಿ ಡೆಡ್ಲೈನ್ ವಿಸ್ತರಣೆ, ಮತ್ತೆ 3 ತಿಂಗಳು ಅವಕಾಶ
ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಅವರ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ಮತ್ತು ವೇಗಿಗಳಾದ ತುಷಾರ್ ದೇಶಪಾಂಡೆ ಮತ್ತು ಮಥೀಶ ಪತಿರಾನ ಅವರ ಅತ್ಯುತ್ತಮ ಬೌಲಿಂಗ್ ಸನ್ ರೈಸರ್ಸ್ ಹೈದರಾಬಾದ್ ತಂಡದ ಸೋಲಿಗೆ ಕಾರಣವಾಯಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡ ತಮ್ಮ ತವರಿನಲ್ಲಿ ನಡೆದ ಪಂದ್ಯವನ್ನು 78 ರನ್ ಗಳಿಂದ ಗೆದ್ದುಕೊಂಡಿತು.
ದೇಶಪಾಂಡೆ ತಮ್ಮ ಮೊದಲ ಓವರ್ನಲ್ಲಿ ಅಭಿಷೇಕ್ ಶರ್ಮಾ (15) ಮತ್ತು ನಾಯಕ ಪ್ಯಾಟ್ ಕಮಿನ್ಸ್ (5) ಅವರ ವಿಕೆಟ್ ಕೀಳುವ ಮುನ್ನ ಆರಂಭಿಕರಾದ ಟ್ರಾವಿಸ್ ಹೆಡ್ (13) ಮತ್ತು ಅನ್ಮೋಲ್ ಪ್ರೀತ್ ಸಿಂಗ್ (0) ಅವರ ವಿಕೆಟ್ಗಳನ್ನು ಪಡೆದರು. ಪತಿರಾನಾ ಅವರು ಅಪಾಯಕಾರಿ ಏಡೆನ್ ಮಾರ್ಕ್ರಾಮ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರ ವಿಕೆಟ್ ಕಬಳಿಸಿದರು.
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಗಳಿಸಿತು.
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ 12 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 6 ಬೌಂಡರಿ 3 ಸಿಕ್ಸರ್ ಸಹಿತ 70 ರನ್ ಗಳಿಸಿದರು. ನಂತರ ಬಂದ ವಿಲ್ ಜಾಕ್ಸ್ ಮೊದಲ 16 ಎಸೆತಗಳಲ್ಲಿ ಕೇವಲ 16 ರನ್ ಮಾತ್ರ ಗಳಿಸಿದ್ದರು. ನಂತರ ಬೌಲರ್ಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. 25 ಎಸೆತಗಳಲ್ಲಿ 84 ರನ್ ಗಳಿಸಿ ಮಿಂಚಿದರು