ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು! ಶಿಡ್ಲಘಟ್ಟ

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು,ಮಹಿಳಾ ಸಬಲೀಕರಣ,ಸಂಚಾರಿ ನಿಯಮಗಳ ಪಾಲನೆ,ಮೊಬೈಲ್ ಬಳಕೆಯ ದುಷ್ಪರಿಣಾಮಗಳು,ಆರೋಗ್ಯದ ಬಗ್ಗೆ ಅರಿವು,ಮಕ್ಕಳ ಹಿತದೃಷ್ಠಿಯಿಂದ ಪೋಷಕರ ಜವಾಬ್ದಾರಿಗಳ ವಿಷಯಗಳ ಬಗ್ಗೆ ಆರಕ್ಷಕ ವೃತ್ತ ನಿರೀಕ್ಷಕರಾದ ಎಂ.ಶ್ರೀನಿವಾಸ್ ವಿವರಿಸಿದರು.

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ವಿವರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕೆಲಸಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾ ಕಚೇರಿಯ ಯೋಜನಾಧಿಕಾರಿಗಳಾದ ಸುರೇಶ್ ಗೌಡ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ,ಕಾನೂನುಗಳ ಅರಿವು ಹಾಗೂ ರಕ್ಷಣೆಗಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ನಿರಂತರ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.

ಮಹಿಳೆಯರ ಮತ್ತು ಮಕ್ಕಳ ಕಾನೂನು ಮತ್ತು ಹಕ್ಕುಗಳು ಪೂಜ್ಯ  ಡಾ.ಡಿ.ವೀರೇಂದ್ರ ಹೆಗ್ಗಡೆ

ಪೂಜ್ಯ  ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗು ಮಾತೃಶ್ರೀ ಡಾ. ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಙಾನವಿಕಾಸ ಮಹಿಳಾ ಕಾರ್ಯಕ್ರಮ ಎಂಬ ಪ್ರತ್ಯೇಕ ವಿಭಾಗವನ್ನು ರಚಿಸುವ ಮೂಲಕ ಪ್ರತಿ ತಾಲ್ಲೂಕಿನ 125 ಸ್ವ-ಸಹಾಯ ಸಂಘಗಳಿಂದ ಒಟ್ಟು 1250 ಮಂದಿ ಮಹಿಳಾ ಸದಸ್ಯರಿಗೆ ಪ್ರತಿ ತಿಂಗಳು ಮಹಿಳಾ ಮತ್ತು ಮಕ್ಕಳ ಕಾನೂನಿನ ಬಗ್ಗೆ ಅರಿವು,ಶಿಕ್ಷಣದ ಮಹತ್ವ ಮತ್ತು ಪೋಷಕರ ಪಾತ್ರ ಮುಂತಾದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ನಗರ ಠಾಣೆಯ ಪಿಎಸ್ಐ ವೇಣುಗೋಪಾಲ್‌,ಎಎಸ್ಐ  ವೆಂಕಟರವಣಪ್ಪ, ಧರ್ಮಸ್ಥಳ ಯೋಜನೆಯ ಸಿಬ್ಬಂದಿಯಾದ ಧನಂಜಯ್, ರಾಘವೇಂದ್ರ, ಪ್ರಗತಿ ಬಂಧು ಹಾಗೂ  ಸ್ವ-ಸಹಾಯ ಸಂಘಗಳ ಸದಸ್ಯರು ಇನ್ನೀತರರು ಹಾಜರಿದ್ದರು.

Leave a Comment