ವಾಪಸ್ ಬಂದಿದ್ದು ₹1.70 ಲಕ್ಷ ಕೋಟಿ

ವಾಪಸ್ ಬಂದಿದ್ದು ₹1.70 ಲಕ್ಷ ಕೋಟಿ

ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಆಸ್ಥಾನದಲ್ಲಿದ್ದರೂ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಯಾವುದೇ ಕೊಡುಗೆಗಳನ್ನು ನೀಡದೆ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ 2025-26ನೇ ಸಾಲಿನ ಕೇಂದ್ರ ಬಜೆಟ್‌ಗೆ ಪ್ರತಿಕ್ರಿಯಿಸಿದ್ದರು. ತೆರಿಗೆ ಆದಾಯ ಹಂಚಿಕೆಯಲ್ಲೂ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಆಗುತ್ತಿದೆ ಎಂದು ಕರ್ನಾಟಕ ಹೇಳುತ್ತಲೇ ಬಂದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ದಕ್ಷಿಣದ ರಾಜ್ಯಗಳ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದು ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ರಾಜ್ಯಗಳ ಬಿಜೆಪಿ ಹೊರತಾದ ಸಂಸದರು ಸಂಸತ್ತಿನಲ್ಲೂ ಆರೋಪಿಸಿದ್ದಾರೆ.
‘ರಾಜ್ಯಗಳಿಂದ ಸಂಗ್ರಹಿಸಲಾಗುವ ತೆರಿಗೆಯಲ್ಲಿ ಎಷ್ಟು ಪಾಲನ್ನು ರಾಜ್ಯಗಳಿಗೆ ವಾಪಸ್ ನೀಡಬೇಕೆಂಬುದನ್ನು ನಿರ್ಧರಿಸುವುದು ಕೇಂದ್ರ ಹಣಕಾಸು ಆಯೋಗ.

ಇದನ್ನೂ ಓದಿ: ಕನ್ನಡದ ನೆಂಟಸ್ತನ, ಲಿಪಿಗೆ ಬಡತನ!

ಈ ತೆರಿಗೆ ಹಂಚಿಕೆ ಮಾಡಲು ಆರು ಮಾನದಂಡಗಳನ್ನು ಆಯೋಗ ನಿಗದಿಪಡಿಸಿದೆ. ಈ ಮಾನದಂಡಗಳು ಅಭಿವೃದ್ಧಿ ಹೊಂದಿದ ರಾಜ್ಯಗಳ ಹಿತಕ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯ ಕಾರಣದಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟಕ್ಕೆ ಪರಿಹಾರ ನೀಡುವ ವ್ಯವಸ್ಥೆ ಮುಂದುವರಿಸಲು ಸಾಧ್ಯವಿಲ್ಲಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ, ತಮಿಳುನಾಡಿನಂತಹ ದಕ್ಷಿಣದ ರಾಜ್ಯಗಳಿಗೆ ಕೇಂದ್ರ ಸರ್ಕಾರದ ತೆರಿಗೆ ಪಾಲು, ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುದಾನ ಸಿಗುತ್ತಿರುವುದು ಕಡಿಮೆ. ಇದನ್ನು ಹಣಕಾಸು ಸಚಿವಾಲಯ ನೀಡಿರುವ ಐದು ವರ್ಷಗಳ ಅಂಕಿಅಂಶಗಳೇ ಹೇಳುತ್ತಿವೆ. ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದ ಶಶಿ ತರೂರ್
ಕೇಳಿರುವ ಪ್ರಶ್ನೆಗೆ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು ರಾಜ್ಯಗಳಿಂದ ಸಂಗ್ರಹಿಸಿರುವ ತೆರಿಗೆ, ರಾಜ್ಯಗಳಿಗೆ ನೀಡಿರುವ ಅನುದಾನದ ವಿವರಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

Leave a Comment