ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾ? ಈ ದಿನಾಂಕದಂದು ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:
– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು
– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್ಗೆ ಅರ್ಹರಾಗುತ್ತಾರೆ.
– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು
– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಮತದಾರರ ಗುರುತಿನ ಚೀಟಿ (ವೋಟರ್ ಐಡಿ)ಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು 2024
ಸರ್ಕಾರ ಹೊಸ ಕಾರ್ಡ್ ವಿತರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ಬಗ್ಗೆ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಏಪ್ರಿಲ್ 1 ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 1 ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ಪಡೆಯಲು ಅಗತ್ಯ ದಾಖಲೆಗಳು
ಆಧಾರ್ ಕಾರ್ಡ್,
ಮನೆಯ ಸದಸ್ಯರ ಆಧಾರ್ ಕಾರ್ಡ್ಗಳು,
ಆದಾಯ, ಜಾತಿ, ನಿವಾಸ ಪ್ರಮಾಣ ಪತ್ರ
ಮೊಬೈಲ್ ಸಂಖ್ಯೆ (ಕಡ್ಡಾಯ)
ಬಾಡಿಗೆದಾರರಿಗೆ ಒಪ್ಪಂದ ಪತ್ರ (ಕಡ್ಡಾಯ)
ಮೇಲೆ ನೀಡಲಾದ ದಾಖಲಾತಿಗಳನ್ನು ನೀವು ಸರಿಪಡಿಸಿಕೊಂಡು ಏಪ್ರಿಲ್ ಒಂದನೇ ತಾರೀಖಿನಿಂದ ಅರ್ಜಿ ಸಲ್ಲಿಸಲು ನಿಮಗೆ ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಗ್ರಾಮ ಒನ್, ಬೆಂಗಳೂರು ಒನ್ , ಕರ್ನಾಟಕ ಒನ್ ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಇಲ್ಲಿ ಕ್ಲಿಕ್ ಮಾಡಿ ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.