SSLC ಫಲಿತಾಂಶ 2024 ರಲ್ಲಿ ಬಾಲಕಿಯರದ್ದೇ ಮೇಲುಗೈ- ಉಡುಪಿಗೆ ಪ್ರಥಮ ಸ್ಥಾನ

SSLC ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ:

SSLC ಫಲಿತಾಂಶವನ್ನು SSLC (10 ನೇ) ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಈಗ ಕರ್ನಾಟಕ 10 ನೇ ತರಗತಿ ಫಲಿತಾಂಶಗಳನ್ನು ಹುಡುಕುತ್ತಿದ್ದಾರೆ. ಇತ್ತೀಚಿನ ಸುದ್ದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) KSEAB SSLC ಫಲಿತಾಂಶಗಳನ್ನು 9ನೇ ಮೇ 2024 ರಂದು 10:30 AM ಕ್ಕೆ ಪ್ರಕಟಿಸಿದೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ  ಪ್ರಕಟವಾಗಿದೆ. ಒಟ್ಟು 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ 6,31,204 ತೇರ್ಗಡೆಯಾದ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.
ಇದನ್ನೂ ಓದಿ:-
ಕರ್ನಾಟಕ SSLC 2024 ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಿ!

SSLC ಫಲಿತಾಂಶದಲ್ಲಿ ಲಿಂಗವಾರು ಒಟ್ಟಾರೆ ಫಲಿತಾಂಶ:-

ಬಾಲಕರು: 2,87,416  (65.90%)
ಬಾಲಕಿಯರು-3,43,788  (81.11%)

ಈ ವರ್ಷ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :-

1)ಉಡುಪಿ ಪ್ರಥಮ ಸ್ಥಾನ(94%)
2)ದಕ್ಷಿಣ ಕನ್ನಡ ,ದ್ವೀತಿಯ ಸ್ಥಾನ(92.12%)
3)ಶಿವಮೊಗ್ಗ (88.67%)

ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲ್ಲೆ ಯಾದಗಿರಿ 50.59%

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್ ಮಂಜುಶ್ರೀ ,ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್, SSLC ಬೋರ್ಡ್ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

 

Leave a Comment